Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:37 - ಕನ್ನಡ ಸತ್ಯವೇದವು C.L. Bible (BSI)

37 ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:37
14 ತಿಳಿವುಗಳ ಹೋಲಿಕೆ  

ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”


ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.


ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು