Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10-11 ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10-11 ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮರ್‍ನಾಚ್ಯಾ ಭಯಂಕರ್ ಕಸ್ಟಾತ್ನಾ ತೆನಿಚ್ ಅಮ್ಕಾ ರಾಕ್ಲ್ಯಾನ್; ಅನಿ ಫಿಡೆಬಿ ತೊಚ್ ಅಮ್ಕಾ ರಾಕ್ತಾ. ಅಮ್ಕಾ ಕನ್ನಾಬಿ ಸೊಡುನ್ ಘಾಲಿನಸಲ್ಲ್ಯಾ, ತೆಚ್ಯಾ ವರ್ತಿ ಅಮ್ಚೊ ಬರೊಸೊ ಅಮಿ ಥವ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:10
14 ತಿಳಿವುಗಳ ಹೋಲಿಕೆ  

ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು