Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:17 - ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದನ್ನು ಯೋಚಿಸಿದಾಗ ಚಪಲಚಿತ್ತನಾಗಿದ್ದೆನೋ? ನಾನು ಯೋಚಿಸುವದನ್ನು ಕೇವಲ ಮಾನುಷಬುದ್ಧಿಯಿಂದ ಯೋಚಿಸಿ ಹೌದು ಹೌದು ಅಂದ ಮೇಲೆ ಅಲ್ಲ ಅಲ್ಲ ಅನ್ನುವವನಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ಕರುನ್ ಯವ್ಜಲ್ಲ್ಯಾ ತನ್ನಾ ಮಿಯಾ ಚಂಚಲ್ ಮನಾಚೊ ಮನುನ್ ಹೊಲೆ ಕಾಯ್? ಮಾಜಿ ಯವ್ಜನಿಯಾ ಮಜ್ಯಾ ಗರುಕಿನ್ ಯೆಲಾತ್ ಮನುನ್ ಹೊಲೆ ಕಾಯ್? ಎಗ್ದಾ ಹೊಯ್ - ಹೊಯ್ ಮಟಲ್ಲೆ ತನ್ನಾಚ್ ಮಿಯಾ “ನ್ಹಯ್ - ನ್ಹಯ್” ಮಟ್ಲೊ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:17
14 ತಿಳಿವುಗಳ ಹೋಲಿಕೆ  

ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.


ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು