Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:21 - ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವುಚ್ ತುಮ್ಕಾ ಅನಿ ಅಮ್ಕಾ ಅಭಿಶೆಕ್ ಕರುನ್ ಕ್ರಿಸ್ತಾಚ್ಯಾ ಎಕ್ವಟ್ಟಾನ್ ಘಟ್ ರ್‍ಹಾಯ್ ಸಾರ್ಕೆ ಕರ್ತಾ, ತೆ ದೆವಾನುಚ್ ಅಮ್ಕಾ ಎಗ್ಳುನ್ ಕಾಡಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:21
28 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II


ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು