Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ; ಆತನು ಕನಿಕರವುಳ್ಳ ತಂದೆಯೂ ಸಕಲವಿಧವಾಗಿ ಸಂತೈಸುವ ದೇವರೂ ಆಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಕ್ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್ ಹೊಗ್ಳಾಪ್, ತೊ ದಯಾ ದಾಕ್ವುತಲೊ ಬಾಬಾ, ಸಗ್ಳಿ ಮಜತ್ ತ್ಯಾಚ್ ದೆವಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:3
26 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ನಾನೇ ನಿಮ್ಮನ್ನು ಸಂತೈಸುವೆನು ತಾಯಿಯಂತೆ ಸಾಂತ್ವನ ದೊರಕುವುದು ನಿಮಗೆ ಜೆರುಸಲೇಮಿನಲೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು