Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:4 - ಕನ್ನಡ ಸತ್ಯವೇದವು C.L. Bible (BSI)

4 ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಅಮ್ಚ್ಯಾ ಸಗ್ಳ್ಯಾ ತರಾಸಾಕ್ನಿ ಅಮ್ಕಾ ಮಜತ್ ದಿತಾ; ತಸೆ ಮನುನ್ ತೆಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಮಜತಿಚ್ಯಾ ವೈನಾ ಸಗ್ಳ್ಯಾ ಕಸ್ಟಾತ್ನಿ ಪಡಲ್ಲ್ಯಾ ದುಸ್ರ್ಯಾಕ್ನಿ ಮಜತ್ ಕರುಕ್ ಅಮಿ ಪಾವ್ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:4
24 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು