Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶೆ ಕ್ರಿಸ್ತಾಚ್ಯಾ ಕಸ್ಟಾತ್ನಿ ಅಮಿ ವಾಟೊ ಘೆತಾಂವ್, ತಸೆ ಕ್ರಿಸ್ತಾ ವೈನಾ ಭರ್ಪುರ್ ಮಜತ್‌ಬಿ ಅಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:5
13 ತಿಳಿವುಗಳ ಹೋಲಿಕೆ  

ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು