Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮಗೆ ಸಂಕಟಬರುತ್ತದೋ ಅದರಿಂದ ನಿಮಗೆ ಧೈರ್ಯವೂ ರಕ್ಷಣೆಯೂ ಉಂಟಾಗುತ್ತದೆ; ನಮಗೆ ಸಂಕಟ ಪರಿಹಾರವಾಗುತ್ತದೋ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮಿ ಕಸ್ಟಾತ್ನಿ‍ ಶಿರಕ್ತಾವ್ ಹೆ ತುಮ್ಚ್ಯಾ ಮಜತಿ ಅನಿ ಸುಟ್ಕಾಸಾಟ್ನಿ; ಅಮ್ಕಾ ಮಜತ್ ಗಾವ್ತಾ ಜಾಲ್ಯಾರ್ಬಿ ತಿ ತುಮ್ಚ್ಯಾ ಮಜತಿಸಾಟ್ನಿ ಅನಿ ಆಮ್ಕಾ ಗಾವಲ್ಲೊ ಕಸ್ಟ್ ತುಮ್ಕಾಬಿ ಗಾವಲ್ಯಾ ತನ್ನಾ ತೆ ಸೊಸುಕ್ ಧೈರೊ ಅನಿ ಬಳ್ ಗಾವ್ಕ್ ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:6
13 ತಿಳಿವುಗಳ ಹೋಲಿಕೆ  

ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು