Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮಲ್ಲಿ ನಮಗೆ ಅಚಲವಾದ ಭರವಸೆಯಿದೆ. ಏಕೆಂದರೆ, ನಮ್ಮ ಯಾತನೆಗಳಲ್ಲಿ ನೀವು ಪಾಲುಗೊಳ್ಳುವಂತೆ ನಾವು ಪಡೆಯುವ ಸಾಂತ್ವನದಲ್ಲಿಯೂ ನೀವು ಸಹಭಾಗಿಗಳಾಗಿದ್ದೀರಿ, ಎಂಬುದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರ ಆದರಣೆಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ವರ್‍ತಿ ಹೊತ್ತೊ ಅಮ್ಚೊ ಬರೊಸೊ ಬಿಲ್ಕುಲ್ ಹಾಲಿ ಸಾರ್ಕೊ ನಾ; ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಕಸ್ಟಾತ್ ತುಮಿ ಬಾಗ್ ಘೆಟ್ಲ್ಯಾಶಿ. ತಸೆಚ್ ಅಮ್ಕಾ ಪಾಳ್ತಾ ತ್ಯಾ ಮಜತಿತ್‌ಬಿ ತುಮಿ ಭಾಗ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:7
16 ತಿಳಿವುಗಳ ಹೋಲಿಕೆ  

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು