Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:12 - ಕನ್ನಡ ಸತ್ಯವೇದವು C.L. Bible (BSI)

12 ಕೆಲವರು ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅವರಂತೆ ಕೊಚ್ಚಿಕೊಳ್ಳುವುದಕ್ಕೂ ಅವರೊಡನೆ ಹೋಲಿಸಿಕೊಳ್ಳುವುದಕ್ಕೂ ನಾವು ಯತ್ನಿಸುವುದಿಲ್ಲ. ಅವರಿಗೆ ತಾವು ಹಾಕಿಕೊಂಡದ್ದೇ ಅಳತೆಗೋಲು. ತಮಗೆ ತಾವೇ ತಾಳೆಹಾಕಿಕೊಳ್ಳುವಂಥ ಅವಿವೇಕಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿಕೊಳ್ಳುವದಕ್ಕಾಗಲಿ ನಮಗೆ ಧೈರ್ಯಸಾಲದು; ಅವರಂತೂ ತಮ್ಮ ತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾವು ಬಹಳ ಪ್ರಾಮುಖ್ಯವಾದವರೆಂದು ಯೋಚಿಸುವ ಆ ಜನರ ಗುಂಪಿನೊಡನೆ ಸೇರಿಕೊಳ್ಳಲು ನಮಗೆ ಧೈರ್ಯಸಾಲದು. ನಾವು ನಮ್ಮನ್ನು ಅವರೊಂದಿಗೆ ಹೋಲಿಸಿಕೊಳ್ಳುವುದಿಲ್ಲ. ಅವರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುತ್ತಾರೆ; ತಮ್ಮನ್ನು ತಾವೇ ಮೌಲ್ಯಮಾಪನ ಮಾಡಿಕೊಳ್ಳುತ್ತಾರೆ. ಅವರಿಗೆ ಏನೂ ಗೊತ್ತಿಲ್ಲವೆಂದು ಇದೇ ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಪ್ನಾಚೆಚ್ ಮೊಟೆಪಾನ್ ಬೊಲ್ತ್ಯಾತ್ ತೆಂಚ್ಯಾ ಸರ್ಕೆ ಹೊವ್ಕ್ ನಾ ಹೊಲ್ಯಾರ್ ಅಮ್ಕಾಚ್ ತೆಂಚ್ಯಾ ಸಮಾಸಮಾ ಕರುಕ್ ಅಮ್ಕಾ ಧೈರೊ ಪಾವಿನಾ. ಅಪ್ನಿ ಮೊಟೆ ಮನುನ್ ಚಿಂತುನ್ ನಾಹೊಲ್ಯಾರ್ ಎಕಾಮೆಕಾಕ್ ಸಮಾ ಕರುನ್ ತೆನಿ ಅಪ್ಲೆಚ್ ಪಿಶೆಪಾನ್ ದಾಕ್ವುತ್ಯಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:12
10 ತಿಳಿವುಗಳ ಹೋಲಿಕೆ  

ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬಾರದು. ನಮ್ಮನ್ನು ಕುರಿತು ನೀವೇ ಹೆಚ್ಚಳಪಡುವಂತೆ ಒಂದು ಅವಕಾಶವನ್ನು ಒದಗಿಸುತ್ತಿದ್ದೇವೆ, ಅಷ್ಟೆ. ಹೀಗೆ, ಮನುಷ್ಯನ ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಗಳನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!


ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು