Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:13 - ಕನ್ನಡ ಸತ್ಯವೇದವು C.L. Bible (BSI)

13 ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವಾದರೋ ಮೇರೆದಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ನೇವಿುಸಿದಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅಮಿ ಅಮ್ಚಿ ಗಡ್ ಉತ್ರುನ್ ಅಮ್ಚೆಚ್ ಮೊಟೆಪಾನ್ ಬೊಲಿನಾವ್. ದೆವಾನುಚ್ ಅಮ್ಚ್ಯಾ ಕಾಮಾಕ್ ಘಾಟಲ್ಲಿ ಗಡ್ ಹಾಯ್ ಅನಿ ತುಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:13
12 ತಿಳಿವುಗಳ ಹೋಲಿಕೆ  

ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು