Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:15 - ಕನ್ನಡ ಸತ್ಯವೇದವು C.L. Bible (BSI)

15 ಇತರರ ಪ್ರಯಾಸದ ಫಲಗಳನ್ನು ನಮ್ಮದೆಂದುಕೊಂಡು ಎಲ್ಲೆಮೀರಿ ನಾವು ಹೊಗಳಿಕೊಳ್ಳುತ್ತಿಲ್ಲ. ಆದರೆ ನಿಮ್ಮ ವಿಶ್ವಾಸ ವೃದ್ಧಿಯಾದಂತೆಲ್ಲಾ ನಮ್ಮ ಕಾರ್ಯಕ್ಷೇತ್ರ ಇನ್ನೂ ವಿಸ್ತಾರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಮೇರೆದಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹಿಗ್ಗುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬೇರೆಯವರು ಮಾಡಿದ ಪ್ರಯಾಸದ ಫಲಕ್ಕಾಗಿ, ನಾವು ಮೇರೆ ತಪ್ಪಿ ಹೊಗಳಿಕೊಳ್ಳುವವರಲ್ಲ. ಆದರೆ ನಿಮ್ಮ ವಿಶ್ವಾಸವು ವೃದ್ಧಿಯಾದಂತೆ, ನಿಮ್ಮ ಮಧ್ಯೆ ನಮ್ಮ ಸೇವಾಕ್ಷೇತ್ರವು ಅಧಿಕವಾಗಿ ವಿಸ್ತಾರವಾಗಬೇಕೆಂದು ನಿರೀಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದುಸ್ರ್ಯಾನಿ ಕರಲ್ಲೆ ಕಾಮ್ ಅಮಿಚ್ ಕರಲ್ಲೆ ಮನುನ್ ದಾಕ್ವುನ್ ದಿವ್ಕ್ ಗಡ್ ಉತ್ರುನ್ ಅಮ್ಚಿ ಬಡಾಯ್ ಬೊಲುಕ್ ಅಮಿ ತಯಾರ್ ನಾವ್. ಖರೆ ಬರೊಸೊ ಎವ್ಡೊಚ್ ತುಮ್ಚೊ ವಿಶ್ವಾಸ್ ವಾಡುನ್ಗೆತ್ ಯೆತಾ, ತಶೆಚ್ ಅಮ್ಚೊ ಪ್ರಭಾವ್ ತುಮ್ಚ್ಯಾ ವರ್‍ತಿ ಲೈ ಅನಿ ಲೈ ಪಡುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:15
4 ತಿಳಿವುಗಳ ಹೋಲಿಕೆ  

ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ.


ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು