2 ಕೊರಿಂಥದವರಿಗೆ 10:7 - ಕನ್ನಡ ಸತ್ಯವೇದವು C.L. Bible (BSI)7 ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಡೊಳ್ಯಾಕ್ನಿ ದಿಸ್ತಾ ತೆ ಎವ್ಡೆಚ್ ತುಮಿ ಪಸಂದ್ ಕರ್ತ್ಯಾಶಿ ಕೊನ್ ತರ್ ಎಕ್ಲೊ ಅಪ್ನಿ ಕ್ರಿಸ್ತಾಚೊ ಮನುನ್ ಅಪ್ನಾಚಿಚ್ ಬಡಾಯ್ ಬೊಲ್ತಾ ಹೊಲ್ಯಾರ್, ತೊ ಅನಿಪರ್ತುನ್ ಚಿಂತುನ್ ಬಗುಂದಿತ್; ತೊ ಕ್ರಿಸ್ತಾಚೊ ಹೊಲ್ಯಾರ್ ಅಮಿಬಿ ಕ್ರಿಸ್ತಾಚೆಚ್. ಅಧ್ಯಾಯವನ್ನು ನೋಡಿ |
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.