2 ಕೊರಿಂಥದವರಿಗೆ 10:8 - ಕನ್ನಡ ಸತ್ಯವೇದವು C.L. Bible (BSI)8 ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮ್ಚ್ಯಾಸಾಟ್ನಿ ನ್ಹಯ್, ತುಮ್ಚ್ಯಾ ವಾಡಾವಳಿಸಾಟ್ನಿ ಧನಿಯಾನ್ ಮಾಕಾ ದಿಲ್ಲ್ಯಾ ಅಧಿಕಾರಾಚ್ಯಾ ವಿಶಯಾತ್ ಮಿಯಾ ಉಲ್ಲಿ ಬಡಾಯ್ ಚಿಂತ್ಲಾ ರ್‍ಹಾವ್ಕ್ ಫಿರೆ ; ಖರೆ ಅಶೆ ಯವಜಲ್ಲ್ಯಾ ವೈನಾ ಮಾಕಾ ಕಾಯ್ ಲಜ್ಜಾ ದಿಸಿನಾ . ಅಧ್ಯಾಯವನ್ನು ನೋಡಿ |