1 ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.
ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು
ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.
ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.
ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!
ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.
ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.
ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.
ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.
ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.