Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮಗೆ ಭಾರವಾಗದಿರುವುದು ನಿಮ್ಮ ಮೇಲೆ ನನಗೆ ಪ್ರೀತಿಯಿಲ್ಲದಿರುವ ಕಾರಣದಿಂದಲೋ? ಇಲ್ಲ! ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆ ಕಶ್ಯಾಕ್? ಮಿಯಾ ತುಮ್ಚೊ ಪ್ರೆಮ್ ಕರಿನಾ ಮನುನ್ ಹೊಲೆ ಕಾಯ್? ಮಿಯಾ ತುಮ್ಚೊ ಪ್ರೆಮ್ ಕರ್‍ತಾ ಮನುನ್ ದೆವಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:11
15 ತಿಳಿವುಗಳ ಹೋಲಿಕೆ  

ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು