Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:18 - ಕನ್ನಡ ಸತ್ಯವೇದವು C.L. Bible (BSI)

18 ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನೇಕ ಜನರು ತಮ್ಮ ಪ್ರಾಪಂಚಿಕ ಜೀವನದ ಬಗ್ಗೆ ಹೊಗಳಿಕೊಳ್ಳುತ್ತಿದ್ದಾರೆ. ಆದ್ದರಿಂದ ನಾನು ಸಹ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಲೈ ಲೊಕಾ ಹ್ಯಾ ಜಗಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಅಪ್ಲಿ ಬಡಾಯ್ ಬೊಲ್ತ್ಯಾತ್ ಹೊಲ್ಯಾರ್ ಮಿಯಾಬಿ ತಸೆ ಕಶ್ಯಾಕ್ ಬೊಲುಚೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:18
13 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು