2 ಕೊರಿಂಥದವರಿಗೆ 11:25 - ಕನ್ನಡ ಸತ್ಯವೇದವು C.L. Bible (BSI)25 ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಿನ್ ದಾ ಮಾಕಾ ಟೊನ್ಯಾನಿ ಮಾರಲ್ಲೆ ಹಾಯ್ ; ಎಗ್ದಾ ಮಾಕಾ ಗುಂಡ್ಯಾನಿ ಮಾರುನ್ ಹೊಲಾ, ತಿನ್ ದಾ ಮಾಜಿ ಢೊನ್ ಫುಟ್ಲಾ; ಎಕ್ ರಾತ್ ಅನಿ ಎಕ್ ದಿಸ್ ಸಮುಂದರಾಚ್ಯಾ ಪಾನಿಯಾತ್ ಮಿಯಾ ರ್‍ಹಾಲಾ. ಅಧ್ಯಾಯವನ್ನು ನೋಡಿ |
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.