Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:3 - ಕನ್ನಡ ಸತ್ಯವೇದವು C.L. Bible (BSI)

3 ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸಾಪಾನ್ ಎವೆಕ್ ಅಪ್ನಾಚ್ಯಾ ಎಕ್ ಪಾಪಾತ್ ಪಡಿ ಸರ್ಕೆ ಕರ್‍ಲ್ಯಾನ್, ತಸೆಚ್ ತುಮ್ಚಿ ಮನಾಬಿ ಅಡ್ವ್ಯಾ ಯವ್ಜನ್ಯಾ ಭರುನ್ ಹಾಳ್ ಹೊತಿಲ್ ಅನಿ ಕ್ರಿಸ್ತಾತ್ಲ್ಯಾ ಸಾದ್ಯಾ ಅನಿ ಒಪ್ಸುನ್ ದಿಲ್ಲ್ಯಾ ಜಿವನಾಕ್ನಾ ತುಮಿ ಧುರ್ ಜಾಸಿಲಾ ಮನುನ್ ಮಾಕಾ ಭಿಂಯೆ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:3
47 ತಿಳಿವುಗಳ ಹೋಲಿಕೆ  

ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.


ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ .


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು