Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:31 - ಕನ್ನಡ ಸತ್ಯವೇದವು C.L. Bible (BSI)

31 ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದೆವಾ ಅನಿ ಬಾಬಾಕ್ ಸದಾ ಸರ್ವತಾಕ್ ಸ್ತುತಿ ಹೊಂವ್ದಿತ್! ತೆಕಾ ಗೊತ್ತ್ ಹಾಯ್ ಮಿಯಾ ಝುಟೆ ಬೊಲಿನಾ ಮನುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:31
22 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.


ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು