2 ಕೊರಿಂಥದವರಿಗೆ 11:4 - ಕನ್ನಡ ಸತ್ಯವೇದವು C.L. Bible (BSI)4 ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ! ಅಧ್ಯಾಯವನ್ನು ನೋಡಿ |