Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:1 - ಕನ್ನಡ ಸತ್ಯವೇದವು C.L. Bible (BSI)

1 ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೊಗಳಿಕೊಳ್ಳುವದು ವಿಹಿತವಲ್ಲದಿದ್ದರೂ ಅದು ನನಗೆ ಅವಶ್ಯವಾಗಿದೆ. ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನು ಕುರಿತೂ ತಿಳಿಯಪಡಿಸಿದ ರಹಸ್ಯಗಳನ್ನು ಕುರಿತೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜಿ ಬಡಾಯ್ ಬೊಲುನ್ ಕಾಯ್ಬಿ ಫಾಯ್ದೊ ನಾ, ಜಾಲ್ಯಾರ್ಬಿ ಮಿಯಾ ಅತ್ತಾ ತಿ ಸಾಂಗುಚೆ ಮನುನ್ ಯೆಲಾ. ತಸೆಮನುನ್ ಧನಿಯಾನ್ ಮಾಕಾ ದಿಲ್ಲ್ಯಾ ದರ್ಶನಾಂಚ್ಯಾ ಅನಿ ದಾಕ್ವನ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:1
26 ತಿಳಿವುಗಳ ಹೋಲಿಕೆ  

ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.


“ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.


ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?


ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು