Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:11 - ಕನ್ನಡ ಸತ್ಯವೇದವು C.L. Bible (BSI)

11 ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಎಕ್ ಪಿಶ್ಯಾ ಸರ್ಕೊ ಬೊಲ್ತಾ, ಖರೆ ಮಾಕಾ ಪಿಸೊ ಹೊಯ್ ಸರ್ಕೊ ಕರಲ್ಲೆ ತುಮಿಚ್. ಮಾಜ್ಯಾ ವಿಶಯಾತ್ ಅಭಿಮಾನ್ ಬೊಲ್ತಲೆ ಹೊತ್ತೆ, ಮಿಯಾ ಕಾಯ್ಬಿ ನ್ಹಯ್ ಹೊಲ್ಯಾರ್ ಬಿ ತ್ಯಾ ಮೊಟ್ಯಾ ಅಪೊಸ್ತಲಾಂಚ್ಯಾ ಇದ್ರಾಕ್ ಮಿಯಾ ಕಮಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:11
17 ತಿಳಿವುಗಳ ಹೋಲಿಕೆ  

“ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.


ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.


ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.


ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?


ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು