Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:14 - ಕನ್ನಡ ಸತ್ಯವೇದವು C.L. Bible (BSI)

14 ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ಬೆಟ್ ದಿವ್ಚಿ ಮನುನ್ ಮಿಯಾ ಅತ್ತಾ ತಿನ್ವೆ ಪಟಿ ತಯಾರ್ ಹೊಲಾ. ಖರೆ ಯೆಲ್ಯಾರ್ ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ಮಾಕಾ ಮನ್ ನಾ. ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಮನುನ್ ಹೊತ್ತೆ ಮಾಕಾ ಕಾಯ್ಬಿ ನಕ್ಕೊ, ಮಾಕಾ ತುಮಿ ಪಾಜೆ. ಪೊರಾನಿ ಬಾಯ್ ಬಾಬಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ ನ್ಹಯ್, ಬಾಯ್ ಬಾಬಾನಿ ಪೊರಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:14
28 ತಿಳಿವುಗಳ ಹೋಲಿಕೆ  

ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.


ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.


ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು