Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:15 - ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ತುಮ್ಚ್ಯಾಸಾಟ್ನಿ ಮಾಜೆ ಮನುನ್ ಹೊತ್ತೆ ಸಗ್ಳೆ ಖರ್ಚ್ ಕರ್‍ತಾ ಅನಿ ಮಾಜೊ ಜಿವ್ ಸೈತ್ ತುಮ್ಚ್ಯಾಸಾಟ್ನಿ ಕರಗ್ತಾ. ಮಿಯಾ ತುಮ್ಚೊ ಎವ್ಡೊ ಪ್ರೆಮ್ ಕರ್ತನಾ ತುಮಿ ಮಾಜೊ ಕಮ್ಮಿ ಪ್ರೆಮ್ ಕರುಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:15
22 ತಿಳಿವುಗಳ ಹೋಲಿಕೆ  

ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.


ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು