Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:19 - ಕನ್ನಡ ಸತ್ಯವೇದವು C.L. Bible (BSI)

19 ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎವ್ಡೊ ಎಳ್ ಪತರ್ ತುಮ್ಚ್ಯಾಕ್ಡೆ ಬೊಲುನ್ ಅಮ್ಚಿ ಮರ್ಯಾದ್ ರಾಕುಕ್ ಮಿಯಾ ಬಗುಕ್ ಲಾಗ್ಲಾ ಮನುನ್ ತುಮಿ ಚಿಂತುಕ್ ಫಿರೆ. ನಾ ದೆವಾಚ್ಯಾ ಇದ್ರಾಕ್ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಮಿ ಅಶೆಚ್ ಬೊಲ್ತಾಂವ್. ಪ್ರಿತಿಚ್ಯಾ ದೊಸ್ತಾನು ತುಮ್ಚಿ ವಾಡಾವಳುಚ್ ಅಮ್ಚ್ಯಾ ಜಿವನಾಚಿ ಗುರಿ ಮನುನ್ ಮಿಯಾ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:19
20 ತಿಳಿವುಗಳ ಹೋಲಿಕೆ  

ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು