Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಚ್ಯಾಕ್ಡೆ ಯೆತಾನಾ ಮಾಜ್ಯಾ ಮನಾ ಸರ್ಕೆ ತುಮಿ ಹಾಶಿ ಕಾಯ್, ನಾಹೊಲ್ಯಾರ್ ತುಮ್ಚ್ಯಾ ಮನಾ ಸರ್ಕೊ ಮಿಯಾ ಹಾವ್ ಕಾಯ್ ನಾ. ಹೆಚೆ ಮಾಕಾ ಭಿಂಯೆ ದಿಸುಕ್ ಲಾಗ್ಲಾ. ತುಮ್ಚ್ಯಾ ಮದ್ದಿ ಝಗ್ಡೆ, ಎಕಾಮೆಕಾಕ್ ಜಳ್ತಲೆ, ದ್ವೆಶ್, ಸ್ವಾರ್ಥ್, ಚಾಡಿ ಬೊಲ್ತಲೆ, ಪುಸ್ಪುಸುನ್ ಬೊಲ್ತಲೆ, ಗರುಕಿಚಿ ಚಾಲ್ ಅನಿ ಗುಸ್ಪಾ ಗೊಂದಳ್ ಬಗುಕ್ ಗಾವ್ತಾಕಾ ಕಾಯ್ ಮನ್ತಲೆ ಭಿಂಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:20
34 ತಿಳಿವುಗಳ ಹೋಲಿಕೆ  

ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಹಗೆಯವರು ಎನಗೆ ವಿರುದ್ಧ ಗುಜುಗುಟ್ಟುತಿಹರು I ಅವರೆಲ್ಲರು ಎನಗೆ ಕೇಡನೆ ಕಲ್ಪಿಸುತಿಹರು: II


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು