2 ಕೊರಿಂಥದವರಿಗೆ 12:6 - ಕನ್ನಡ ಸತ್ಯವೇದವು C.L. Bible (BSI)6 ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮಿಯಾ ಮಾಜಿ ಬಡಾಯ್ ಸಾಂಗಿಲ್‍ತರ್ ತೆ ಪಿಶೆಪಾನ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬೊಲ್ತಾ ತೆ ಖರೆ ಹಾಯ್. ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ದಿಸ್ತಾ ಅನಿ ಮಾಜೆಕ್ನಾ ಆಯ್ಕುಕ್ ಗಾವ್ತಾ ತೆಚ್ಯಾನ್ಕಿ ಜಾಸ್ತಿ ಮಾಜ್ಯಾ ವಿಶಯಾತ್ ಮೊಟೆ ಕೊನ್‍ಬಿ ಚಿಂತ್ತಲೆ ನಕ್ಕೊ. ತಸೆ ಮನುನ್ ಮಿಯಾ ಸಾಂಗಿನಾ. ಅಧ್ಯಾಯವನ್ನು ನೋಡಿ |