Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:7 - ಕನ್ನಡ ಸತ್ಯವೇದವು C.L. Bible (BSI)

7 ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾಕಾ ದಾಕ್ವುನ್ ದಿಲ್ಲ್ಯಾ ಸಾದಾರನ್ ನ್ಹಯ್ ಹೊತ್ತ್ಯಾ ದಾಕ್ವನಿ ವಿಶಯಾತ್ ಸಾಂಗುಚೆ ಹೊಲ್ಯಾರ್, ಮಿಯಾ ತೆಚೆಸಾಟ್ನಿ ಗುರುಕಿತ್ ಪಡುಚೆ ನ್ಹಯ್ ಮನುನ್ ಮಾಜ್ಯಾ ಆಂಗಾತ್ ಅಳಕ್ತಲೊ ಕಾಟೊ ದಿಲ್ಲೊ ಹಾಯ್, ಮಿಯಾ ಗರುಕಿ ಕರುಚೆ ನ್ಹಯ್ ಮನುನ್, ಹ್ಯೊ ಸೈತಾನಾಚೊ ದುತ್ ಮಾಕಾ ಮುಟ್ಕೊ ಮಾರಿತ್ ಅನಿ ಟೊಪುನ್ಗೆತ್ ರಾತಾ..

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:7
25 ತಿಳಿವುಗಳ ಹೋಲಿಕೆ  

ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.


ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.


ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು