Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:3 - ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಮಾಜ್ಯಾ ವೈನಾ ಕ್ರಿಸ್ತ್ ಬೊಲ್ತಾ ಮನ್ತಲಿ ಖಾತ್ರಿ ತುಮ್ಕಾ ಗಾವ್ತಾ. ತುಮ್ಚ್ಯಾ ವಾಂಗ್ಡಾ ತೊ ಬಳನಸಲ್ಲ್ಯಾ ಸರ್ಕೊ ನ್ಹಯ್, ಖರೆ ಅಮ್ಚ್ಯಾ ಮದ್ದಿ ತೊ ತಾಕ್ತಿಚೊ ಮನುನ್ ದಾಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:3
14 ತಿಳಿವುಗಳ ಹೋಲಿಕೆ  

ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.


ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ನಿಮ್ಮಲ್ಲಿ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ.


ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು