Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ವಿಶ್ವಾಸಾನ್ ಜಿವನ್ ಕರುಕ್ ಲಾಗ್ಲ್ಯಾಶಿ ಕಾಯ್ ನಾ, ಹೆಚ್ಯಾ ವಿಶಯಾತ್ ತುಮ್ಚಿಚ್ ತಪಾಸ್ನಿ ಕರುನ್ ಬಗಾ. ಕ್ರಿಸ್ತ್ ತುಮ್ಚ್ಯಾ ಮದ್ದಿ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮ್ಚ್ಯಾ ಖಟ್ಪಟಾತ್ನಿ ತುಮ್ಕಾ ಕಾಯ್ಬಿ ಫಳ್ ಗಾವುಕ್‍ನಾ ಹೊಲ್ಯಾರ್ ಅಶೆ ಘಡಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:5
50 ತಿಳಿವುಗಳ ಹೋಲಿಕೆ  

ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.


ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು.


ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು