Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:10 - ಕನ್ನಡ ಸತ್ಯವೇದವು C.L. Bible (BSI)

10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆಬಿ ಹ್ಯಾ ಪರ್‌ಜಳಾಚ್ಯಾ ಇದ್ರಾಕ್ ಅದ್ದಿ ಪರ್‌ಜಳ್ ಮನುನ್ ಹೊತ್ತೆ ತೆ ಅತ್ತಾ ಪರ್‌ಜಳ್ ನಸಲ್ಲ್ಯಾ ಸರ್ಕೆ ಹೊಲಾ ಮನುನ್ ಅಮ್ಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:10
11 ತಿಳಿವುಗಳ ಹೋಲಿಕೆ  

ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.


ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು