2 ಕೊರಿಂಥದವರಿಗೆ 3:14 - ಕನ್ನಡ ಸತ್ಯವೇದವು C.L. Bible (BSI)14 ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆಂಚಿ ಮನಾ ಧಾಪಲ್ಲಿ ಹೊತ್ತಿ, ಅನಿ ಅಜುನ್ ಪತರ್ ಬಿ ಜುನ್ನೊ ಕರಾರ್ ವಾಚ್ತಾನಾ ತೆಂಚಿ ಮನಾ ಫಾಳಿನಿ ಧಾಪಲ್ಲಿ ರ್‍ಹಾತ್ಯಾತ್, ಖರೆ ಕ್ರಿಸ್ತಾಚ್ಯಾ ವೈನಾ ತಿ ಫಾಳಿ ಉಗ್ಡುನ್ ಹೊತಾ. ಅಧ್ಯಾಯವನ್ನು ನೋಡಿ |