Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಧನಿಯಾ ಕಡೆ ಪರತಲ್ಲ್ಯಾ ತನ್ನಾ ತೆ ಧಾಪಲ್ಲೆ ಪಡುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:16
13 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.


ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.


ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು