2 ಕೊರಿಂಥದವರಿಗೆ 3:18 - ಕನ್ನಡ ಸತ್ಯವೇದವು C.L. Bible (BSI)18 ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೊಂಡಾರ್ ಕಾಯ್ಬಿ ಧಾಪಿ ನಸ್ತಾನಾ ಧನಿಯಾಚಿ ಮಹಿಮಾ ದಾಕ್ವುನ್ ದಿತಲೆ ಅಮಿ ಹೊತಾಂವ್, ಅಶೆ ಅಮಿ ಧನಿಯಾಚ್ಯಾ ಮಹಿಮೆನ್ ಲೈ ಅನಿ ಲೈ ಹೊಳ್ ಹೊಳ್ತಾಂವ್ ಅನಿ ತೆಚ್ಯಾ ಸರ್ಕೆ ಹೊವ್ನ್ ರುಪ್ ಬದಲ್ತಾವ್. ಹೆ ಸಗ್ಳೆ ಆತ್ಮೊ ಹೊವ್ನ್ ಅಸಲ್ಲ್ಯಾ ಧನಿಯಾಚೆಚ್ ಕಾಮ್. ಅಧ್ಯಾಯವನ್ನು ನೋಡಿ |