2 ಕೊರಿಂಥದವರಿಗೆ 3:3 - ಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಸ್ಲೊಬಿ ಸಂಶೆವ್ ನಸ್ತಾನಾ ತುಮಿಚ್ ಕ್ರಿಸ್ತಾನ್ ಲಿವಲ್ಲಿ ಅನಿ ಅಮ್ಚ್ಯಾ ವೈನಾ ಧಾಡುನ್ ದಿಲ್ಲಿ ಚಿಟಿ; ಶಾಯಿನ್ ಲಿವಲ್ಲಿ ನ್ಹಯ್, ಝಿತ್ತ್ಯಾ ದೆವಾಚ್ಯಾ ಆತ್ಮ್ಯಾನ್ ಗುಂಡ್ಯಾ ವೈನಿ ತೆ ಲಿವಲ್ಲೆ ನಾ, ಖರೆ ಮಾನ್ಸಾಚೆ ಕಾಳಿಜಾರ್ ಲಿವಲ್ಲೆ. ಅಧ್ಯಾಯವನ್ನು ನೋಡಿ |