Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:9 - ಕನ್ನಡ ಸತ್ಯವೇದವು C.L. Bible (BSI)

9 ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಚ್ಯಾ ವೈರ್ ಚುಕ್ ವಾವ್ತಲೆಚ್ ಯೆವ್ಡೆ ಪರ್‌ಜಳಾನ್ ಭರಲ್ಲೆ ರ್‍ಹಾಲ್ಯಾರ್, ಅಮ್ಕಾ ಪವಿತ್ರಪಾನ್ ದಿತಾ ತಿ ರಿತ್ ಕವ್ಡಿ ಜಾಸ್ತಿ ಪರ್‌ಜಳಾನ್ ಭರಲ್ಲಿ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:9
23 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು