Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)

10 ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುಚೊ ಜಿವ್ ಅಮ್ಚ್ಯಾ ಆಂಗಾನ್ ದಿಸುನ್ ಯೆವ್‍ಸಾಟ್ನಿ ತೆಚೆ ಮರಾನ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ವಾವುನ್ ಘೆವ್ನ್ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:10
17 ತಿಳಿವುಗಳ ಹೋಲಿಕೆ  

ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.


ಈ ಮಾತು ನಂಬತಕ್ಕದ್ದಾಗಿದೆ:


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು