Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:11 - ಕನ್ನಡ ಸತ್ಯವೇದವು C.L. Bible (BSI)

11 ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುಚೊ ಜಿವ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ದಿಸುನ್ ಯೆವ್‍ಸಾಟ್ನಿ ಅಮ್ಚ್ಯಾ ಜಿವನಾಚ್ಯಾ ಹರ್ ಎಕ್ ದಿಸಿ ಜೆಜುಸಾಟ್ನಿ ಮರ್ನಾಚ್ಯಾ ಪರಿಸ್ತಿತಿತ್ ಅಮ್ಕಾಚ್ ಅಮಿ ಸೊಡುನ್ ಸೊಡ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:11
11 ತಿಳಿವುಗಳ ಹೋಲಿಕೆ  

ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II


ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.


ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು