Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗೆ ನಮ್ಮಲ್ಲಿ ಮರಣವು ಪ್ರವರ್ತಿಸುತ್ತದೆ; ಆದರೆ ನಿಮ್ಮಲ್ಲಿ ಜೀವವು ಪ್ರವರ್ತಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮಟ್ಲ್ಯಾರ್, ಅಮ್ಚ್ಯಾ ಭುತ್ತುರ್ ಮರಾನ್ ಅಪ್ನಾಚೆ ಕಾಮ್ ಕರುನ್ಗೆತ್ ಹಾಯ್, ಖರೆ ಜಿವ್ ತುಮ್ಚ್ಯಾ ಭುತ್ತುರ್ ಕಾಮಾ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:12
9 ತಿಳಿವುಗಳ ಹೋಲಿಕೆ  

ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು