Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜೆಜುಕ್ ಝಿತ್ತೊ ಕರುನ್ ಉಟ್ವಲ್ಲೊ ತೊಚ್ ದೆವ್ ಅಮ್ಕಾಬಿ ಜೆಜುಚ್ಯಾ ವಾಂಗ್ಡಾ ಝಿತ್ತೊ ಕರ್‍ತಾ ಅನಿ ತುಮ್ಕಾ ಅಪ್ನಾಚ್ಯಾ ಇದ್ರಾಕ್ ಘೆವ್ನ್ ಜಾತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:14
16 ತಿಳಿವುಗಳ ಹೋಲಿಕೆ  

ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು