Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆಚ್ಯಾಸಾಟ್ನಿ ಅಮಿ ಧೈರೊ ಕಳ್ದುನ್ ಘೆಯ್ನಾವ್, ಅಮ್ಚೊ ಭಾಯ್ಲೊ ಸ್ವಬಾವ್ ಉಲ್ಲೊ ನಾಸ್ ಹೊವ್ನಗೆತ್ ಯೆತಾ, ಜಾಲ್ಯಾರ್ ಬಿ ಅಮ್ಚೊ ಭುತ್ತುರ್‍ಲೊ ಸ್ವಬಾವ್ ಹರ್ ಎಕ್ ದಿಸಾಬಿ ಜಿವಾನಿ ಭರುನ್ಗೆತ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:16
22 ತಿಳಿವುಗಳ ಹೋಲಿಕೆ  

ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ನಿಮ್ಮ ಹೃನ್ಮನಗಳು ನವೀಕೃತವಾಗಲಿ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು