Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:6 - ಕನ್ನಡ ಸತ್ಯವೇದವು C.L. Bible (BSI)

6 “ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಶ್ಯಾಕ್ ಮಟ್ಲ್ಯಾರ್ “ಕಾಳ್ಕಾತ್ನಾ ಉಜ್ವೊಡ್ ಹೊಳ್ವುಂದಿತ್” ಮಟಲ್ಲ್ಯಾ ದೆವಾನ್ ಜೆಜು ಕ್ರಿಸ್ತಾಚ್ಯಾ ತೊಂಡಾ ವರ್‍ತಿ ಹೊಳ್ವುತಲ್ಯಾ ದೆವಾಚ್ಯಾ ಮಹಿಮೆಚಿ ವಳಕ್ ಅಮ್ಕಾ ಗಾವುಕ್ ಸಾಟ್ನಿ, ಅಪ್ನಾಚೊ ಉಜ್ವೊಡ್ ಅಮ್ಚ್ಯಾ ಮನಾತ್ನಿ ಫಾಕಿ ಸರ್ಕೊ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:6
35 ತಿಳಿವುಗಳ ಹೋಲಿಕೆ  

ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.


ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು