Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:8 - ಕನ್ನಡ ಸತ್ಯವೇದವು C.L. Bible (BSI)

8 ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹರ್ ಎಕ್ ರಿತಿನ್ ಅಮಿ ಕಸ್ಟ್ ಖಾತಾವ್, ಜಾಲ್ಯಾರ್ಬಿ ಅಮಿ ಕಂಗಾಲ್ ಹೊಯ್ನಾವ್. ವಾಟ್ ಗಾವಿನಸ್ತಾನಾ ಕಾಳ್ಕಾತ್ ಶಿರಕ್ತಾವ್, ಜಾಲ್ಯಾರ್ ಬಿ ಅಮಿ ಭಿಂಯ್ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:8
26 ತಿಳಿವುಗಳ ಹೋಲಿಕೆ  

ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II


ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು