2 ಕೊರಿಂಥದವರಿಗೆ 5:1 - ಕನ್ನಡ ಸತ್ಯವೇದವು C.L. Bible (BSI)1 ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜಗಾತ್ ಹೊತ್ತಿ ಅಮ್ಚೆ ಬಿಡಾರ್ ಮಟ್ಲ್ಯಾರ್ ಅಮ್ಚೆ ಆಂಗ್ ಮನ್ತಲೆ ಮೊಡುನ್ ಗೆಲ್ಯಾರ್ ಬಿ, ದೆವಾನ್ ತಯಾರ್ ಕರಲ್ಲೆ ಮಟ್ಲ್ಯಾರ್ ಹಾತಿನ್ ಭಾಂದಿನಸಲ್ಲೆ ಸರ್ವತಾಕ್ ರ್‍ಹಾತಲೆ ಘರ್ ಅಮ್ಕಾ ತಯಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |