Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:10 - ಕನ್ನಡ ಸತ್ಯವೇದವು C.L. Bible (BSI)

10 ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಆಂಗಾಚ್ಯಾ ಜಿವನಾತ್ ಕರಲ್ಲ್ಯಾ ಬರ್‍ಯಾ ನಾಹೊಲ್ಲ್ಯಾರ್ ಝುಟ್ಯಾ ಕಾಮಾಂಚೊ ಪ್ರತಿಫಳ್ ಅಪ್ನಾಕ್ ಗಾವುಸಾಟಿ ಹರಿ ಎಕ್ಲ್ಯಾನ್ ದೆವಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಚಾರ್ನಿಕ್ ಇಬೆ ರ್‍ಹಾತಲೆ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:10
38 ತಿಳಿವುಗಳ ಹೋಲಿಕೆ  

ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು