Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:13 - ಕನ್ನಡ ಸತ್ಯವೇದವು C.L. Bible (BSI)

13 ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್ ಅಮಿ ಬುದ್ದ್ ನಸಲ್ಲೆ ಹೊಲಾಂವ್ ಜಾಲ್ಯಾರ್, ತೆ ದೆವಾಸಾಟಿ ಹೊಲಾಂವ್. ಅಮಿ ಸಮಾ ಬುದ್ದಿನ್ ಹಾವ್ ಜಾಲ್ಯಾರ್ ತುಮ್ಚ್ಯಾಸಾಟ್ನಿ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:13
15 ತಿಳಿವುಗಳ ಹೋಲಿಕೆ  

ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು