Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕ್ರಿಸ್ತಾಚ್ಯಾ ಪ್ರೆಮಾನ್ ಅಮ್ಕಾ ಯಾಂಗ್ ಮಾರುನ್ ಧರಲ್ಲೆ ಹಾಯ್. ಸಗ್ಳ್ಯಾ ಲೊಕಾಂಚ್ಯಾಸಾಟಿ ಎಕ್ಲೊ ಮರ್ಲೊ ಮನುನ್ ಹೊಲ್ಯಾರ್, ಸಗ್ಳೆ ಜಾನಾ ಮರ್ಲ್ಯಾತ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:14
43 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದುಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು