Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:17 - ಕನ್ನಡ ಸತ್ಯವೇದವು C.L. Bible (BSI)

17 ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಶೆ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಕ್ರಿಸ್ತಾತ್ ಜಿವನ್ ಕರ್‍ತಾ ಹೊಲ್ಯಾರ್ ತೊ ಎಕ್ ನ್ಹವಿ ರಚ್ನಾ, ತನ್ನಾ ಜುನ್ನೆ ಹೊತ್ತೆ ನಾಸ್ ಹೊವ್ನ್ ತೆ ಗೆಲೆ ಅನಿ ಅತ್ತಾ ಸಗ್ಳೆ ನ್ಹವೆ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:17
46 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ.


ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.


ನನ್ನ ಸ್ವದೇಶೀಯರಾದ ಹೆರೋಡಿಯೊನನಿಗೂ ನಾರ್ಕಿಸ್ಸನ ಕುಟುಂಬದವರಲ್ಲಿ ಕ್ರೈಸ್ತರಾದವರಿಗೂ ನನ್ನ ವಂದನೆಗಳು.


ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.


ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು