2 ಕೊರಿಂಥದವರಿಗೆ 5:18 - ಕನ್ನಡ ಸತ್ಯವೇದವು C.L. Bible (BSI)18 ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹೆ ಸಗ್ಳೆ ದೆವಾಚೆ ಕಾಮ್. ತೆನಿಚ್ ಅಮ್ಕಾ ಕ್ರಿಸ್ತಾಚ್ಯಾ ವೈನಾ ಅಪ್ನಾಕ್ಡೆ ಎಕ್ ಕರುನ್ ಘೆಟ್ಲ್ಯಾನಾಯ್ ಅನಿ ದುಸ್ರ್ಯಾಕ್ನಿ ರಾಜಿ ಕರುಕ್ ಹಾನ್ತಲಿ ಜವಾಬ್ದಾರಿ ಅಮ್ಕಾ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |